ಕಾಶ್ಮೀರದಲ್ಲಿ 370 ವಿಧಿ ರದ್ದು: ಜಮ್ಮು-ಕಾಶ್ಮೀರ ಭಾರತದಲ್ಲಿ ವಿಲೀನ ಸಂಪೂರ್ಣ!

ಕಾಶ್ಮಿರ ವಿಚಾರವಾಗಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊಸ ಇತಿಹಾಸ ಬರೆಯಲು ಮುಂದಾಗಿ ಬಾಗಶಃ ಯಶಸ್ವಿಯಾಗಿದೆ.ಜಮ್ಮು ಮತ್ತು ಕಾಶ್ಮೀರವನ್ನು ಲಡಾಖ್‌, ಜಮ್ಮು ಹಾಗೂ ಕಾಶ್ಮೀರ ಎಂದು ಮೂರು ಭಾಗಗಳನ್ನಾಗಿ ವಿಂಗಡಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಅಮಿತ್‌ ಶಾ ಪ್ರಸ್ತಾಪಿಸಿದ್ದಾರೆ.

ಕಾಶ್ಮೀರ ಪ್ರದೇಶದ ಬೇಸ್ ಕ್ಯಾಂಪ್‌ನಲ್ಲಿ ಭಾರತೀಯ ಪೊಲೀಸರು ಕಾವಲು ಕಾಯುತ್ತಿರುವುದು

ಶ್ರೀನಗರದಲ್ಲಿ ಭಾನುವಾರ ತಡರಾತ್ರಿ ಸರ್ಕಾರ. ನಿಷೇಧಾಜ್ಞೆ ಜಾರಿಮಾಡಿರುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ಫೀಪಲ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಗನಿ ಲೊನ್ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಪ್ತಿ ಹಾಗೂ ಒಮರ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.ಮಾಜಿ ಶಾಸಕರು ಸೇರಿದಂತೆ ಹಲವು ಪ್ರಮುಖ ನಾಯಕರುಗಳಿಗೆ ತಮ್ಮ ನಿವಾಸಗಳಿಂದ ಹೊರಗೆ ಬರದಂತೆ ಸೂಚಿಸಲಾಗಿದೆ.
ನಿಷೇಧಾಜ್ಞೆ ವಿಧಿಸುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಸೇರಿದಂತೆ ಉನ್ನತ ಭದ್ರತಾ ಅಧಿಕಾರಿಗಳೊಂದಿಗೆ ಸಭೆ ಸೇರಿ ಚರ್ಚೆ ನಡೆಸಿದರು.
ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ಶಾಲಾ ಕಾಲೇಜುಗಳು ಮುಚ್ಚಿರಲಿವೆ. ಸಾರ್ವಜನಿಕ ನಡೆಸುವ ಸಭೆಗಳನ್ನು ನಿರ್ಬಂಧಿಸಲಾಗಿದೆ. ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು,
ಕಾಶ್ಮೀರದಾದ್ಯಂತ ಮೊಬೈಲ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಸ್ಯಾಟಲೈಟ್ ಪೋನ್ ಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ.
ಕೆಲ ದಿನಗಳಿಂದ ಜಮ್ಮು ಕಾಶ್ಮೀರದ ವಿಷಯದಲ್ಲಿ ಕಾಡುತ್ತಿದ್ದ ಅನಿಶ್ಚಿತತೆಗೆ ಇಂದು ಕೇಂದ್ರದಿಂದ ಸಮರ್ಪಕ ಉತ್ತರ ಸಿಕ್ಕಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಆರ್ಟಿಕಲ್ 370, 35ಎ ರದ್ದುಗೊಳಿಸುವ ಐತಿಹಾಸಿಕ ಪ್ರಯತ್ನಕ್ಕೆ ಕೇಂದ್ರ ಕೈ ಹಾಕಿದ್ದು, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಂಗಡಿಸಲು ಮುಂದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಸಂಸತ್ ನಲ್ಲಿ ಜಮ್ಮು-ಕಾಶ್ಮೀರವನ್ನು ವಿಭಜನೆ ಮಾಡುವ ಐತಿಹಾಸಿಕ ನಿರ್ಣಯವನ್ನು ಘೋಷಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ

ಐತಿಹಾಸಿಕ ಮಸೂದೆ ಮಂಡಿಸಿದ ಭಾರತ ಸರ್ಕಾರದ ಗೃಹಮಂತ್ರಿ ಅಮಿತ್ ಶಾ
ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ನಾಲ್ಕು ಮಸೂದೆಗಳ ಕುರಿತು ಚರ್ಚೆಯಾಗಬೇಕೆಂದು ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷಗಳ ಗದ್ದಲದ ನಡುವೆ 370, 35ಎ ವಿಧಿಗಳನ್ನು ರದ್ದುಗೊಳಿಸುವ ವಿಧೇಯಕವನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ. ಇದರ ಜೊತೆಗೆ ಜಮ್ಮು ಕಾಶ್ಮೀರ ಮೀಸಲಾತಿ ತಿದ್ದುಪಡಿ ಕಾಯ್ದೆ ಮಸೂದೆಯನ್ನೂ ಮಂಡಿಸಿದರು.
ಜಮ್ಮು-ಕಾಶ್ಮೀರದಿಂದ ಲಡಾಕ್ ನ್ನು ಪ್ರತ್ಯೇಕಗೊಳಿಸಿ, ಎರಡೂ ಪ್ರದೇಶಗಳು ಇನ್ನು ಮುಂದಿನ ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶವಾಗಿರಲಿವೆ. ಜಮ್ಮು-ಕಾಶ್ಮೀರ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಲಿದೆ, ಲಡಾಕ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿರಲಿದೆ. ಈ ಪ್ರಸ್ತಾವನೆಯನ್ನೂ ಅಮಿತ್ ಶಾ ರಾಜ್ಯಸಭೆಯಲ್ಲಿ ಮಂಡಿಸಿದರು. ವಿಧೇಯಕ ಮಂಡನೆಯಾಗುತ್ತಿದ್ದಂತೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಗದ್ದಲ ಮುಂದುವರೆದ ಕಾರಣ ಕಲಾಪವನ್ನು ಮುಂದೂಡಲಾಯಿತು.
ಆರ್ಟಿಕಲ್ 370 ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನ ನೀಡಿದರೆ, 35ಎ ರಾಜ್ಯದ ನಾಗರಿಕರಿಗೆ ವಿಶೇಷ ಹಕ್ಕು ಮತ್ತು ಸವಲತ್ತುಗಳನ್ನು ನೀಡಲು ಅವಕಾಶ ಮಾಡಿಕೊಡುತ್ತದೆ. ಈ ವಿಶೇಷಾಧಿಕಾರದ ಕಾರಣದಿಂದಾಗಿ ರಕ್ಷಣೆ, ವಿದೇಶಾಂಗ ವ್ಯವಹಾರ, ಹಣಕಾಸು, ಸಂವಹನ ಕ್ಷೇತ್ರಗಳನ್ನು ಹೊರತುಪಡಿಸಿ ಭಾರತದ ಸಂಸತ್ತಿಗೆ ಬೇರೆ ಯಾವುದೇ ತೀರ್ಮಾನ ತೆಗೆದುಕೊಳ್ಳಬೇಕೆಂದರೂ ಜಮ್ಮು ಕಾಶ್ಮೀರ ಸರ್ಕಾರ ಒಪ್ಪಿಗೆ ಇರಲೇಬೇಕಿತ್ತು.

ಕಳೆದ ಒಂದು ವಾರದ ಅಂತರದಲ್ಲಿ ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ಸುಮಾರು 38 ಸಾವಿರ ಹೆಚ್ಚುವರಿ ಸೈನಿಕರನ್ನು ರವಾನೆ ಮಾಡಲಾಗಿತ್ತು.ಇದಕ್ಕಾಗಿ ಸಿ-17 ಹರ್ಕ್ಯುಲಸ್ ವಿಮಾನದ ಬಳಕೆ ಮಾಡಿ ಸೈನಿಕರನ್ನು ಕಾಶ್ಮೀರಕ್ಕೆ ರವಾನೆ ಮಾಡಿದೆ. ಈ ನಡುವೆ ಭಾನುವಾರ ತಡರಾತ್ರಿ ಕಣಿವೆ ರಾಜ್ಯದಲ್ಲಿ ಹೈಡ್ರಾಮಾ ನಡೆದಿದ್ದು, ರಾತ್ರೋ ರಾತ್ರಿ ರಾಜಧಾನಿ ಶ್ರಿನಗರ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಮೊಬೈಲ್ ಇಂಟರ್ನೆಟ್ ಅನ್ನು ನಿಷೇಧಿಸಲಾಗಿದೆ.

ಮಧ್ಯರಾತ್ರಿ ಸಭೆ ನಡೆಸಿದ ರಾಜ್ಯಪಾಲರು
ಆದಷ್ಟು ಬೇಗ ಯಾತ್ರಿಗಳು ಹಾಗೂ ಪ್ರವಾಸಿಗಳು ಕಣಿವೆ ಬಿಟ್ಟು ಮರಳಬೇಕು ಎಂದು ಜಮ್ಮು ಕಾಶ್ಮೀರ ಸರ್ಕಾರ ಹೇಳಿತ್ತು. ಜಮ್ಮು- ಕಾಶ್ಮೀರದಲ್ಲಿ ನಿಷೇಧಾಜ್ಞೆ ಜಾರಿಯಾದ ಬೆನ್ನಲ್ಲೇ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಭಾನುವಾರ ಮಧ್ಯರಾತ್ರಿ ಭದ್ರತಾ ಕಾರ್ಯದರ್ಶಿ, ಡಿಜಿಪಿ ಹಾಗೂ ಐಜಿಪಿಗಳ ಸಭೆ ಕರೆದು ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದರು.

ಸುದ್ಧಿ ಸಂಗ್ರಹ:- ವಿ ಸಿ ಎಸ್ ನ್ಯೂಜ಼್ ತಂಡ

Leave a Reply

Your email address will not be published. Required fields are marked *

Don`t copy text!