ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಗುರುವಾರ!?.

ರಾಜ್ಯ ಮೈತ್ರಿ ಸರ್ಕಾರದ ಅಸ್ತಿತ್ವ ಉಳಿಸಿಕೊಳ್ಳಲು ನಡೆಯುತ್ತಿರುವ ಬೃಹನ್ನಾಟಕಕ್ಕೆ ಸದ್ಯ ಗುರುವಾರದವರೆಗೆ ಪರದೆ ಎಳೆಯಲಾಗಿದೆ. ಗುರುವಾರ ತೆರದ ನಂತರ ಮುಂದಿನ ಆಟ ಶುರುವಾಗಲಿದಿಯಂತೆ. ಅಂದರೆ ವಿಶ್ವಾಸ ಮತ ಯಾಚನೆಯನ್ನು ಸಿಎಂ ಗುರುವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.

ಬೆಂಗಳೂರು: ಜು.18 ರಂದು ಗುರುವಾರ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಜು.15 ರಂದು ಸ್ಪೀಕರ್ ನೇತೃತ್ವದಲ್ಲಿ ನಡೆದ ಕಲಾಪ ಸದನ ಸಮಿತಿ ಸಭೆಯಲ್ಲಿ ಗುರುವಾರದಂದು ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವ ಬಗ್ಗೆ ತೀರ್ಮಾನಿಸಲಾಯಿಒತು. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ವಿಪಕ್ಷ ನಾಯಕ ಯಡಿಯೂರಪ್ಪ ಸಭೆಯಲ್ಲಿ ಭಾಗವಹಿಸಿದ್ದರು.
ಗುರುವಾರ ಸಿಎಂ ವಿಶ್ವಾಸಮತಯಾಚನೆಗೆ ಒಪ್ಪಿಗೆ ಸೂಚಿಸಿರುವ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಜು.18 ವರೆಗೆ ಯಾವುದೇ ಕಲಾಪವನ್ನೂ ನಡೆಸದಂತೆ ಸ್ಪೀಕರ್ ಗೆ ಮನವಿ ಮಾಡಿರುತ್ತಾರೆ.
ಮುಖ್ಯಮಂತ್ರಿಗಳ ಮಾತಿಗೆ ಗೌರವ ಕೊಟ್ಟು ನಾವು ಗುರುವಾರದಂದು ವಿಶ್ವಾಸಮತಯಾಚನೆಗೆ ಒಪ್ಪಿಗೆ ಸೂಚಿಸಿದ್ದೇವೆ, ಆದರೆ ವಿಶ್ವಾಸಮತಯಾಚನೆ ಬಳಿಕವಷ್ಟೇ ಕಲಾಪ ನಡೆಯಬೇಕೆಂದು ಮನವಿ ಮಾಡಿದ್ದೇವೆ” ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ತಿಳಿಸಿರುತ್ತಾರೆ.

ವರದಿ:-ಚ.ಶ್ರೀನಿವಾಸಮೂರ್ತಿ

One thought on “ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಗುರುವಾರ!?.

Leave a Reply

Your email address will not be published. Required fields are marked *

Don`t copy text!