ತುರ್ತು ವಿಚಾರಣೆಗೆ ನಿರಾಕರಣೆ,ಸುಪ್ರೀಂ ನಲ್ಲಿ ಅನರ್ಹ ಶಾಸಕರಿಗೆ ಹಿನ್ನಡೆ.

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌-ಜೆಡಿಎಸ್‌ ಸರಕಾರದ ಪತನಕ್ಕೆ ಕಾರಣವಾಗಿದ್ದ 17 ಜನ ಶಾಸಕರ, ಶಾಸಕತ್ವವನ್ನು ಅನರ್ಹ ಗೋಳಿಸಿದ್ದ ಅಂದಿನ ಸ್ಪೀಕರ್ ರಮೇಶಕುಮಾರ್ ಅವರ ತೀರ್ಪನ್ನು ಪ್ರಶ್ನಿಸಿ ತಮ್ಮ ಅನರ್ಹ ಶಾಸಕರು ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸಿದ್ದರು ಇದಕ್ಕೆ ಸುಪ್ರೀಂ ನೋ ಎಂದು ಹೇಳಿದೆ ಇದರಿಂದ ಅನರ್ಹ ಶಾಸಕರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನಾಯಮೂರ್ತಿಗಳ ಪೀಠ ಇಂದು ಸ್ಪಷ್ಟಪಡಿಸಿದೆ. ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೇಟ್ಟಿಲೇರಿದ್ದ 17 ಅನರ್ಹ ಶಾಸಕರಿಗೆ ಹಿನ್ನೆಡೆಯಾಗಿದೆ.
ಅಯೋಧ್ಯೆ ರಾಮ ಜನ್ಮ ಭೂಮಿ ಪ್ರಕರಣ ಸಂಬಂಧ ಪ್ರತಿದಿನ ವಿಚಾರಣೆ ನಡೆಯುತ್ತಿದ್ದು, ಅನರ್ಹ ಶಾಸಕರ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅರ್ಜಿದಾರರ ಪರ ವಕೀಲ ಮುಕುಲ್ ರೋಹಟಗಿ ಅವರಿಗೆ ಸ್ಪಷ್ಟವಾಗಿ ಸೂಚಿಸಿದ್ದಾರೆ.
ಇದರಿಂದಾಗಿ ತಮ್ಮನ್ನು ಅನರ್ಹತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಅನರ್ಹಗೊಂಡ ಶಾಸಕರಿಗೆ ನಿರಾಸೆಯಾಗಿದೆ.
ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಪಕ್ಷೇತರ ಶಾಸಕರು ರಾಜೀನಾಮೆ ನೀಡುವ ಮೂಲಕ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಪತನಕ್ಕೆ ಕಾರಣರಾಗಿದ್ದರು.ಪಕ್ಷಾಂತರ ನಿಷೇಧ ಕಾಯಿಯಡಿ ಈ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್‌ ಆದೇಶ ನೀಡಿದ್ದರು.
ಇದನ್ನು ಪ್ರಶ್ನಿಸಿ ಎಲ್ಲ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಈಗ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನಾತ್ಮಕ ವಿಷಯವಾಗಿ ಪರಿಣಮಿಸಿದೆ.
ವಿಚಾರಣಾ ದಿನಾಂಕವನ್ನು ನಿಗದಿಗೊಳಿಸುತ್ತೇವೆ. ಸಾಧ್ಯವಾದರೆ ಮತ್ತೊಂದು ಪೀಠದಲ್ಲಿ ವಿಚಾರಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಬಗ್ಗೆ ರಿಜಿಸ್ಟ್ರಾರ್ ಜನರಲ್ ಅವರ ಬಳಿ ತೆರಳಿ ವಿಚಾರಣೆಗೆ ದಿನಾಂಕ ನಿಗದಿ ಮಾಡಿ ಎಂದು ಪೀಠ ಅರ್ಜಿದಾರರ ಪರ ವಕೀಲರಿಗೆ ತಿಳಿಸಿದೆ.

ಅನರ್ಹ ಗೊಂಡಿರುವ ಶಾಸಕರ ಪಟ್ಟಿ:-ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲ ಶಾಸಕರನ್ನು ಅನರ್ಹಗೊಳಿಸಿ ಅಂದಿನ ಸ್ಪೀಕರ್ ರಮೇಶ್ ಕುಮಾರ್ ತೀರ್ಪು ನೀಡಿದ್ದರು.

ವರದಿ:ಚ.ಶ್ರೀನಿವಾಸಮೂರ್ತಿ

Leave a Reply

Your email address will not be published. Required fields are marked *

Don`t copy text!