ಪ್ರಾಮಾಣಿಕ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ರಾಜೀನಾಮೆ!

ಅಚ್ಚರಿಯ ಬೆಳವಣಿಗೆಯಲ್ಲಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ರಾಜೀನಾಮೆ ಪ್ರಕಟಿಸಿದ್ದಾರೆ. ಅವರು ವಿಭಿನ್ನ ಕಾರ್ಯಶೈಲಿಯಿಂದ ಮತ್ತು ಜನಪರ ನಿಲುವುಗಳ ಮೂಲಕ ಗುರುತಿಸಿಕೊಂಡಿದ್ದ ಅವರು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿರುವ ಅವರು ಉತ್ತಮ ಸೇವೆ ಸಲ್ಲಿಸಿ ಜನಾನುರಾಗಿದ್ದರು.

ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ಬೆಂಗಳೂರು:- ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸೇವೆಗೆ ರಾಜೀನಾಮೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ,
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿರುವ ಶಶಿಕಾಂತ್ ಸೆಂಥಿಲ್ IAS ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ, ಅವರು 2017 ಅಕ್ಟೋಬರ್ ನಿಂದ ದ ಕ ಜಿಲ್ಲಾಧಿಕಾರಿಯಾಗಿದ್ದ . ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2009 ರ ಬ್ಯಾಚ್ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾದ ಸೆಂಥಿಲ್ ತಮಿಳುನಾಡು ಮೂಲದವರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರ್ ಪದವೀಧರರು.
ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿ ಹುದ್ದೆಗೆ ಬರುವುದಕ್ಕೂ ಮುಂಚಿತವಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.ದ.ಕ.ಜಿಲ್ಲೆಯಲ್ಲಿ ಕಳೆದ ವರ್ಷ ಬಂದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಟಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಭಾಸಿದ್ದರು. ವೈಯಕ್ತಿಕ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸ್ಪಷ್ಟಪಡಿಸಿರುವ ಸಸಿಕಾಂತ್ ಸೆಂಥಿಲ್, ತನ್ನ ರಾಜೀನಾಮೆಗೆ ಯಾವುದೇ ವ್ಯಕ್ತಿ ಅಥವಾ ಸದ್ಯ ತಾನು ಸೇವೆ ಸಲ್ಲಿಸುತ್ತಿರುವ ದ.ಕ. ಜಿಲ್ಲಾಧಿಕಾರಿ ಅವಧಿಯಲ್ಲಿನ ಯಾವುದೇ ಘಟನೆ ಕಾರಣವಲ್ಲ ಎಂದೂ ಹೇಳಿರುತ್ತಾರೆ.

ರಾಜಿನಾಮೆ ಪತ್ರ

ದೇಶದಲ್ಲಿ ನಡೆಯುತ್ತಿರುವ ಪ್ರಸಕ್ತ ಬೆಳವಣಿಗೆಯಿಂದಾಗಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿರುವ ಅವರು ಈ ನಿರ್ಧಾರಕ್ಕೆ ನಿರ್ದಿಷ್ಟವಾಗಿ ಯಾವ ಬೆಳವಣಿಗೆ ಕಾರಣ ಎಂಬುವುದನ್ನು ಅವರು ಸ್ಪಷ್ಟಹಡಿಸಿಲ್ಲವಾದರು ನಮ್ಮ ವೈವಿಧ್ಯ ಪ್ರಜಾಪ್ರಭುತ್ವ ಕಷ್ಟದಲ್ಲಿದೆ ಈ ಸಂಧರ್ಭದಲ್ಲಿ ರಾಜಿಮಾಡಿಕೊಂಡು ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ನನಗೆ ಅನೈತಿಕವೆಂದು ಅನಿಸಿದೆ ಹಾಗಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ದೇಶದ ಮೂಲ ಚೌಕಟ್ಟುಗಳು ಅತ್ಯಂತ ಕಷ್ಟಕರ ಸವಾಲುಗಳನ್ನು ಎದುರಿಸಲಿದೆ. ನಾನು ಐಎಎಸ್ ನಿಂದ ಹೊರಬಂದು ಸಮಾಜದಲ್ಲಿ ಉತ್ತಮ ಕೆಲಸ ಮಾಡಬೇಕು ಎಂದು ನಿರ್ಧರಿಸಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ವೈಯಕ್ತಿಕ ಕಾರಣಗಳನ್ನು ಮುಂದಿಟ್ಟು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ವರದಿ:ಚ.ಶ್ರೀನಿವಾಸಮೂರ್ತಿ

Leave a Reply

Your email address will not be published. Required fields are marked *

Don`t copy text!