ಅತೃಪ್ತ ಶಾಸಕರ ರಾಜಿನಾಮೆ ಅರ್ಜಿ,ಮಂಗಳವಾರಕ್ಕೆ ಮೂಂದೂಡಿದ ಸುಪ್ರೀಂ

ಬೆಂಗಳೂರು:ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಆತಂಕ ಮೂಡಿಸಿರುವ ಅತೃಪ್ತ ಶಾಸಕರ ರಾಜಿನಾಮೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಮುಂದುವರಿಸುವಂತೆ ಸೂಚನೆ ನೀಡಿ, ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ರಮೇಶ್ ಕುಮಾರ್ ಅವರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ನಿನ್ನೆ ನಡೆದ ವಿಚಾರಣೆಯಲ್ಲಿ ಸ್ಪೀಕರ್ ನಿನ್ನೆಯೇ ರಾಜೀನಾಮೆ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಬೇಕು ಮತ್ತು ಆ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡಬೇಕು ಎಂದು ಕೋರ್ಟ್​ ಸೂಚನೆ ನೀಡಿತ್ತು. ಆದರೆ, ಸ್ಪೀಕರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಸ್ವೀಕರಿಸಿ, ಅಂತಿಮ ತೀರ್ಮಾನಕ್ಕೆ ಕಾಲಾವಕಾಶದ ಅವಶ್ಯಕತೆ ಇದೆ ಎಂದು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದರು.
ಅದರಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗಗೊಯ್ ನೇತೃತ್ವದ ತ್ರಿಸದಸ್ಯ ಪೀಠ, ಪ್ರಸ್ತುತ ಈ ಸಂದರ್ಭದಲ್ಲಿ ಅರ್ಜಿ ಕುರಿತಂತೆ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಇಂತಹುದೇ ನಿರ್ಣಯ ಕೈಗೊಳ್ಳಿ ಎಂದು ಸೂಚಿಸಲು ಬರುವುದಿಲ್ಲ. ಆಲ್ಲಿನ ಅಧಿಕಾರ ತಮ್ಮದಲ್ಲ. ಪ್ರಸ್ತುತ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಇನ್ನೂ ನಿರ್ಣಯ ಕೈಗೊಂಡಿಲ್ಲ. ಅವರು ನಿರ್ಣಯ ಕೈಗೊಂಡ ಬಳಿಕ ಅದು ಸರಿಯೋ ಅಥವಾ ತಪ್ಪೋ ಎಂದು ಪರಿಶೀಲಿಸಬಹುದಾಗಿದೆ. ಎಂದಿರುವ ನ್ಯಾಯಲಯ ಈ ನಿಟ್ಟಿನಲ್ಲಿ ಯಥಾಸ್ಥಿತಿ ಮುಂದುವರೆಸಬೇಕು ಎಂದು ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

ಇನ್ನು ಅತೃಪ್ತ ಶಾಸಕರ ಪರ ಖ್ಯಾತ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದ್ದು, ಸ್ಪೀಕರ್ ಪರವಾಗಿ ವಕೀಲರಾದ ವಾದ ಮಂಡಿಸಿದರು. ಅಂತೆಯೇ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರ ಪರವಾಗಿ, ವಕೀಲ ರಾಜೀವ್ ಧವನ್ ಅವರು ವಾದ ಮಂಡಿಸುತ್ತಿದ್ದಾರೆ.

ವರದಿ ಸಂಗ್ರಹ:-ಚ.ಶ್ರೀನಿವಾಸಮೂರ್ತಿ

Leave a Reply

Your email address will not be published. Required fields are marked *

Don`t copy text!